ಬೆಂಗಳೂರು: ಇಂದು ಕೊಡಗಿನಲ್ಲಿ ಮೊದಲ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕು ದೃಢ... ಮಂಜಿನ ನಗರಿಗೂ ಬಂತು ಮಹಾಮಾರಿ - ಸಚಿವ ಬಿ ಶ್ರೀರಾಮುಲು ನ್ಯೂಸ್
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ. ಕೊಡಗಿನಲ್ಲಿ ಮೊದಲ ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಕೋವಿಡ್-19
ಮಡಿಕೇರಿ ತಾಲೂಕಿನ ಕೊಂಡಗೇರಿ ಗ್ರಾಮದಲ್ಲಿ ಚೊಚ್ಚಲ ಪ್ರಕರಣ ಪತ್ತೆಯಾಗಿದ್ದು, ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿ ಬಂದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಜೊತೆಗೆ ಅವರ ಕುಟುಂಬದವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಇದು ಕರ್ನಾಟಕದ 15 ನೇ ಕೋವಿಡ್-19 ಪ್ರಕರಣ ಎಂದು ರಾಮುಲು ಟ್ವೀಟ್ ಮಾಡಿದ್ದಾರೆ.