ಬೆಂಗಳೂರು:ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ ಸರ್ಕಾರ ಗೊಂದಲದಲ್ಲಿದೆ. ಆಕ್ಸಿಜನ್, ವೆಂಟಿಲೇಟರ್ ಕೊರತೆ ಇದೆ. ಇದರ ಬಗ್ಗೆ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ವಿಧಾನಸೌಧದಲ್ಲಿ ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಕರೆದಿದ್ದ ಸಭೆಯಲ್ಲಿ ಭಾಗಿವಹಿಸಿ ನಂತರ ಮಾತನಾಡಿದ ಅವರು, ಕೊರೊನಾ ಲಸಿಕೆ ಹಾಕಿಸಿಕೊಂಡ ಬಳಿಕವೂ ಜನ ಸಾಯ್ತಿದ್ದಾರೆ. ಇದಕ್ಕೇನು ಪರಿಹಾರ?. ಲಾಕ್ಡೌನ್ ಪ್ರಯೋಜನ ಇಲ್ಲ. ಅದರ ಬದಲು 144 ಸೆಕ್ಷನ್ ಜಾರಿ ಮಾಡಿ ನಾಲ್ಕು ಜನಕ್ಕಿಂತ ಹೆಚ್ಚು ಸೇರದಂತೆ ನೋಡಿಕೊಳ್ಳಬೇಕು. ಸತ್ತ ಮೇಲಾದರೂ ಮಾರ್ಯದೆಯಿಂದ ಅಂತ್ಯ ಸಂಸ್ಕಾರ ಮಾಡಲು ಹೇಳಿದ್ದೇವೆ ಎಂದು ತಿಳಿಸಿದರು.