ಕರ್ನಾಟಕ

karnataka

ETV Bharat / city

ಕೊರೊನಾ ಭೀತಿ: ನಿರಾಶ್ರಿತರ ಶಿಬಿರಗಳ ವರದಿ ಕೇಳಿದ ಹೈಕೋರ್ಟ್

ಕಾರ್ಮಿರಿಗಾಗಿ ಸ್ಥಾಪಿಸಿರುವ ಶಿಬಿರಗಳಿಗೆ ಭೇಟಿ ಕೊಟ್ಟು ಅಲ್ಲಿನ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

By

Published : Apr 4, 2020, 9:32 PM IST

The High Court heard the report of the refugee camps
ಹೈಕೋರ್ಟ್

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿರಿಗಾಗಿ ರಾಜ್ಯಾದ್ಯಂತ ಸರ್ಕಾರ ಸ್ಥಾಪಿಸಿರುವ ಶಿಬಿರಗಳಿಗೆ ಭೇಟಿ ಕೊಟ್ಟು ಅಲ್ಲಿನ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ.

ಕಾರ್ಮಿಕರು ಮತ್ತು ಅಸಂಘಟಿತ ಕೂಲಿ‌ ಕಾರ್ಮಿಕರಿಗೆ ಅಹಾರ ಭದ್ರತೆ ಮತ್ತು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ "ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ (ಪಿಯುಸಿಎಲ್) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ.

ವಲಸೆ ಕಾರ್ಮಿಕರು ಉಳಿದುಕೊಳ್ಳಲು ರಾಜ್ಯಾದ್ಯಂತ ಸರ್ಕಾರ ಸ್ಥಾಪಿಸಿರುವ ಕ್ಯಾಂಪ್‌ಗಳ ವಿವರಗಳನ್ನು ಆಯಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳಿಗೆ ಒದಗಿಸಬೇಕು. ಅದನ್ನು ಆಧರಿಸಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಖುದ್ದು ಅಥವಾ ಸ್ವಯಂ ಸೇವಕರ ಮೂಲಕ ಜಿಲ್ಲೆಯ ಆಯ್ದ ಶಿಬಿರಗಳಿಗೆ ಭೇಟಿ ಕೊಟ್ಟು ಅಲ್ಲಿನ ಮೂಲಸೌಕರ್ಯಗಳ ಪರಿಶೀಲನೆ ನಡೆಸಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ಸಲ್ಲಿಸಬೇಕು. ವರದಿ ಕ್ರೋಢೀಕರಿಸಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ, ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಮಾಹಿತಿ ನೀಡಿ, ವಲಸೆ ಕಾರ್ಮಿಕು ಹಾಗೂ ಸಂಕಷ್ಟದಲ್ಲಿರುವ ಇತರ ವ್ಯಕ್ತಿಗಳಿಗೆ ಉಳಿದುಕೊಳ್ಳಲು ಸರ್ಕಾರ ಅಗತ್ಯ ಪ್ರಮಾಣದಲ್ಲಿ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಿದೆ. ಹಾಗೆಯೇ ಅಲ್ಲಿರುವ ನಿರಾಶ್ರಿತರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬುದರ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನು ಪೀಠಕ್ಕೆ ಸಲ್ಲಿಸಿದರು.

ಇದೇ ವೇಳೆ, ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಮಾಲೀಕರು ಅಥವಾ ಉದ್ಯೋಗದಾತರು ತೆರೆದಿರುವ ಕ್ಯಾಂಪ್‌ಗಳಲ್ಲಿ ರಾಜ್ಯಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರು ಆಶ್ರಯ ಪಡೆದಿದ್ದು ಅವರಿಗೆ ಆಹಾರ ಸಿಗುತ್ತಿಲ್ಲ ಎಂದು ನಮ್ಮ ಸಂಸ್ಥೆಗೆ ದೂರುಗಳು ಬಂದಿವೆ ಎಂದು ಆರೋಪಿಸಿದರು. ಈ ನಿಟ್ಟಿನಲ್ಲಿ ಪೀಠ ಪ್ರಾಧಿಕಾರಕ್ಕೆ ಮೇಲಿನಂತೆ ನಿರ್ದೇಶನ ನೀಡಿದೆ.

ABOUT THE AUTHOR

...view details