ಬೆಂಗಳೂರು: ಮಹದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯಪಾಲರ ಭೇಟಿಗೆ ಅನುಮತಿ ಸಿಗದ ಹಿನ್ನೆಲೆ ರೈತರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯಪಾಲರ ಭೇಟಿಗೆ ಅನುಮತಿ ಸಿಗದಿದ್ರೆ ಉಪವಾಸ: ಮಹದಾಯಿ ಹೋರಾಟಗಾರರು - ಮಹಾದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಸತ್ಯಾಗ್ರಹ
ಮಹದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯಪಾಲರ ಭೇಟಿಗೆ ಅನುಮತಿ ಸಿಗದ ಹಿನ್ನೆಲೆ ರೈತರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾದಾಯಿ ಹೋರಾಟಗಾರರ ಪ್ರತಿಭಟನೆ
ರಾತ್ರಿಯೆಲ್ಲಾ ಧಾರಾಕಾರ ಮಳೆ ಸುರಿದರೂ ಕೂಡ ಅಹೋರಾತ್ರಿ ಧರಣಿ ಮುಂದುವರೆಸಿದರು. ಈ ವೇಳೆ ಮೂವರು ರೈತ ಮಹಿಳೆಯರು ಅಸ್ವಸ್ಥರಾಗಿದ್ದಾರೆ. ಒಂದು ವೇಳೆ ರಾಜ್ಯಪಾಲರು ಭೇಟಿಗೆ ಅನುಮತಿ ನೀಡಿದರೆ, ಮಹದಾಯಿ ನೀರನ್ನು ಉತ್ತರ ಕರ್ನಾಟಕದ ರೈತರಿಗೆ ನೀಡುವಂತೆ ತಕ್ಷಣ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲಿದ್ದಾರೆ.