ಕರ್ನಾಟಕ

karnataka

ETV Bharat / city

ಕಳೆದಿದ್ದ ಚಿನ್ನಾಭರಣಗಳ ಸೂಟ್ ಕೇಸ್​ ವಾರಸುದಾರರಿಗೆ ತಲುಪಿಸಿದ ಹೋಮ್ ಗಾರ್ಡ್.. ಪ್ರಾಮಾಣಿಕತೆಗೆ ಸಲಾಂ

ಪ್ರಯಾಣಿಕರೊಬ್ಬರು ಬೆಂಗಳೂರಿನ ಕೆ ಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ, ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ ಇದ್ದ ಸೂಟ್ ಕೇಸ್ಅನ್ನು ಪತ್ತೆ ಮಾಡಿ, ವಾರಸುದಾರರಿಗೆ ಹಿಂದಿರುಗಿಸಲಾಗಿದೆ.

the-missing-suitcase-found-by-the-home-guard
ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಸೂಟ್ ಕೇಸ್, ವಾರಸುದಾರರಿಗೆ ಹಿಂದಿರುಗಿಸಿದ ಹೋಮ್ ಗಾರ್ಡ್

By

Published : Apr 7, 2022, 6:51 AM IST

ಬೆಂಗಳೂರು : ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೃಹ ರಕ್ಷಕ ದಳದ ಸಿಬ್ಬಂದಿ ಅವರ ಗುರುರಾಜ್​ ಪ್ರಾಮಾಣಿಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ.

ರಮೇಶ್ ಚಂದ್ ಎಂಬುವವರು ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ಅನ್ನು ಕಳೆದುಕೊಂಡಿದ್ದರು. ಈ ಬಗ್ಗೆ ರಮೇಶ್ ಚಂದ್ ಕೆಎಸ್ಆರ್ ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಶೋಧ ನಡೆಸಿದಾಗ ಗೃಹ ರಕ್ಷಕದಳದ ಸಿಬ್ಬಂದಿ ಗುರುರಾಜ್ ಗೆ ಸೂಟ್ ಕೇಸ್ ದೊರೆತಿದ್ದು, ಅದನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.

ಓದಿ :ಜೆಜೆ ನಗರ ವ್ಯಾಪ್ತಿಯಲ್ಲಿ ಯುವಕನ ಹತ್ಯೆ: ಗೃಹ ಸಚಿವ, ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ದೂರು

For All Latest Updates

TAGGED:

ABOUT THE AUTHOR

...view details