ಕರ್ನಾಟಕ

karnataka

ETV Bharat / city

ಜಡ್ಜ್​ಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದ ಹಿಂದಿರುವ ಸಂಘಟನೆ ಬಗ್ಗೆ ತನಿಖೆ ನಡೆಯುತ್ತಿದೆ : ಸಚಿವ ಆರಗ - Accused arrested who threaten Judges

ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಆರೋಪಿ ಹೆಚ್ಚಿನ ವಿಚಾರಣೆ ಒಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ..

Home Minister Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ

By

Published : Mar 25, 2022, 1:16 PM IST

ಬೆಂಗಳೂರು :ಹಿಜಾಬ್ ತೀರ್ಪು ನೀಡಿದ್ದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣದ ಹಿಂದೆ ಯಾವ ಸಂಘಟನೆಗಳು ಇವೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ವಿಧಾನಸೌಧದಲ್ಲಿ ‌ಮಾತನಾಡಿದ ಅವರು, ಪ್ರಕರಣ ಸಂಬಂಧ ಎರಡನೇ ಆರೋಪಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಆರೋಪಿ ಹೆಚ್ಚಿನ ವಿಚಾರಣೆ ಒಳಪಡಿಸಲಾಗುವುದು. ಇದರಿಂದ ತನಿಖೆಗೆ ಸಹಕಾರಿಯಾಗಲಿದೆ. ಒಟ್ಟಾರೆ ಇಬ್ಬರೂ ಆರೋಪಿಗಳ ಬಂಧನವಾಗಿದೆ ಎಂದರು.

ಯೋಗಿ ಆಧಿತ್ಯನಾಥ್ ಅವರು ಇಂದು ಎರಡನೇ ಭಾರಿಗೆ ಉತ್ತರಪ್ರದೇಶ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಅವರಿಗೆ ಶುಭವಾಗಲಿ. ಅಧಿಕಾರ ವಹಿಸಿಕೊಳ್ಳುತ್ತಿರುವ ಯೋಗಿ ಆ ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲಿ ಎಂದು ಹಾರೈಸಿದರು.

ABOUT THE AUTHOR

...view details