ಬೆಂಗಳೂರು:ದಂತ ಚಿಕಿತ್ಸೆಯ ದರ ನಮ್ಮಲ್ಲೇ ಕಡಿಮೆ ಇರೋದು. ದಂತ ಆರೋಗ್ಯಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ದಂತ ವೈದ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊರದೇಶಗಳಲ್ಲಿ ಜನರು ವರ್ಷಕ್ಕೆ ಕನಿಷ್ಠ ಎರಡು ಬಾರಿ ದಂತ ಆರೋಗ್ಯದ ತಪಾಸಣೆ ಮಾಡಿಸಿಕೊಳ್ಳುತ್ತಾರೆ. ಆದರೆ ನಮ್ಮಲ್ಲಿ ಗ್ರಾಮೀಣ ಪ್ರದೇಶದ ಜನರು ಹಲ್ಲು ನೋವು ತಡೆಯಲಾರದ ಮಟ್ಟಿಗೆ ಬಂದಾಗಲೆ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುತ್ತಾರೆ. ಹೊರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ದಂತ ಆರೋಗ್ಯದ ಬಗ್ಗೆ ಜಾಗೃತಿ ಕಡಿಮೆ ಇದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.