ಬೆಂಗಳೂರು: ನೆರೆ ಪರಿಹಾರ ಸಂಬಂಧ ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಯಾವುದೂ ಇಲ್ಲ. ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂತ್ರಸ್ತರಿಗೆ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ. ಮನೆ ಕಳೆದುಕೊಂಡವರಿಗೆ ಕೇವಲ 10 ಸಾವಿರ ರೂ. ಕೊಟ್ಟಿದ್ದು ಬಿಟ್ಟರೆ ಯಾವುದೇ ಪರಿಹಾರ ಕೊಟ್ಟಿಲ್ಲ. ಸಚಿವರು ಹೆದರಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗುತ್ತಿಲ್ಲ. ಹೋದರೆ ಸಂತ್ರಸ್ತರು ಮುತ್ತಿಗೆ ಹಾಕ್ತಾರೆ ಎಂಬ ಭಯ ಅವರನ್ನು ಕಾಡುತ್ತಿದೆ. ಈ ಸರ್ಕಾರ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವುದರಿಂದ ಜನ ಕಷ್ಟ ಅನುಭವಿಸುವಂತಾಗಿದೆ. ಸದನದಲ್ಲಿ ಸಿಎಂ ಯಾವುದಕ್ಕೂ ಸ್ಪಂದಿಸಲಿಲ್ಲ. ಕೇವಲ ಹತ್ತು ನಿಮಿಷ ಉತ್ತರ ನೀಡಿ ಸದನದಿಂದ ತೆರಳಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಕಡಿತ ಮಾಡಿದ್ದ ಅನುದಾನದ ಆದೇಶ ವಾಪಸ್ ಪಡೆಯುವುದಾಗಿ ಸದನದಲ್ಲಿ ಹೇಳಿದ್ದರು. ಆದರೆ ಇದುವರೆಗೂ ಆ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪಕ್ಷ ಹಾಳು ಮಾಡಿದವರನ್ನು ವಾಪಸ್ ಸೇರಿಸಲ್ಲ: