ಕರ್ನಾಟಕ

karnataka

ETV Bharat / city

ಮಂಡ್ಯದಿಂದ ಸುಮಲತಾ ಸ್ಪರ್ಧೆ ಖಚಿತ: ಸಫಲವಾಗಲಿಲ್ಲ ದೊಡ್ಡಗೌಡರ ಲೆಕ್ಕಾಚಾರ! - undefined

ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಿಂದ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಇಂದು ಘೋಷಿಸಿದರು. ಈ ಮೂಲಕ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ದಾರಿಯನ್ನು ಸುಗಮಗೊಳಿಸಲು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಕಿದ್ದ ಲೆಕ್ಕಾಚಾರ ಪ್ಲಾಪ್​​ ಆಗಿದೆ.

ಸುಮಲತಾ ಅಂಬರೀಶ್

By

Published : Mar 18, 2019, 5:39 PM IST

ಬೆಂಗಳೂರು: ಪಕ್ಷೇತರ ಅಭ್ಯರ್ಥಿಯಾಗಿಮಂಡ್ಯದಿಂದ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಇಂದು ಘೋಷಿಸಿದರು. ಈ ಮೂಲಕ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ದಾರಿಯನ್ನು ಸುಗಮಗೊಳಿಸಲು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉರುಳಿಸಿದ ದಾಳ ಯಶಸ್ವಿಯಾಗಲಿಲ್ಲ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಹಿರಿಯ ನಟಿ ಸುಮಲತಾ ಅಂಬರೀಶ್ ಅವರನ್ನು ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿ, ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ತಮ್ಮದು ಎಂದು ದೇವೇಗೌಡರು, ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ವಿವರಿಸಿದ್ದರು. ಅವರ ಮಾತಿನ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಕುರಿತ ಹೆಚ್ಚುವರಿ ಹೊಣೆಗಾರಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತ ಕೆ.ಸಿ.ವೇಣುಗೋಪಾಲ್ ಅವರಿಗೆ ವಹಿಸಿದ್ದರು ಎಂದು ಹೇಳಲಾಗಿತ್ತು.

ಕೆ.ಸಿ.ವೇಣುಗೋಪಾಲ್ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತನಾಡಿ, ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಸುಮಲತಾ ಅವರ ಮನ ಒಲಿಸುವಂತೆ ಹೇಳಿದ್ದರು. ಆದರೆ, ಡಿ.ಕೆ.ಶಿವಕುಮಾರ್ ಅವರ ಯತ್ನವೂ ಸಫಲವಾಗಲಿಲ್ಲ. ಅತ್ತ ಮೈಸೂರು ಲೋಕಸಭಾ ಕ್ಷೇತ್ರದಿಂದ ವಿಜಯಶಂಕರ್ ಹೊರತುಪಡಿಸಿ ಬೇರೆ ಯಾರನ್ನೂ ಅಭ್ಯರ್ಥಿ ಮಾಡಲೂ ತಮ್ಮ ಒಪ್ಪಿಗೆಯಿಲ್ಲ ಎಂದು ಸಿದ್ದರಾಮಯ್ಯ ಅವರಿಂದಲೇ ಎಚ್ಚರಿಕೆಯ ಸಂದೇಶ ರವಾನೆಯಾದ ಮೇಲೆ ಕಾಂಗ್ರೆಸ್ ವರಿಷ್ಠರು ತಣ್ಣಗಾದರು ಎನ್ನಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಸುಮಲತಾ ಅಂಬರೀಶ್​ ಅವರು ಇಂದು ಘೋಷಿಸಿದರು. ಈ ಮೂಲಕ ನಿಖಿಲ್ ವರ್ಸಸ್ ಸುಮಲತಾ ಸ್ಪರ್ಧೆ ಬಹುತೇಕ ಪಕ್ಕಾ ಆದಂತಾಗಿದೆ. ಈ ಮಧ್ಯೆ ಬಿಜೆಪಿಯ ನಡೆ ಇನ್ನೂ ನಿಗೂಢವಾಗಿದೆ. ಸುಮಲತಾ ಅವರನ್ನು ಬಿಜೆಪಿ ಬಹಿರಂಗವಾಗಿ ಬೆಂಬಲಿಸುತ್ತದೋ? ಅಥವಾ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಲು ಮುಂದಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

For All Latest Updates

TAGGED:

ABOUT THE AUTHOR

...view details