ಬೆಂಗಳೂರು:ಕೊರೊನಾ ಹೆಚ್ಚಳದಿಂದ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಭೀತಿಗೆ ಸಿಲುಕಿದ್ದ ಸಿನಿಮಾ ಉದ್ಯಮಕ್ಕೆ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಥಿಯೇಟರ್ಗಳಲ್ಲಿ ಪೂರ್ಣ ಆಸನ ಭರ್ತಿಗೆ ಇರುವ ಅವಕಾಶದಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಥಿಯೇಟರ್ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮುಂದುವರಿಕೆ.... ಸಿನಿಮಾ ಮಂದಿಗೆ ಸಿಹಿ ಸುದ್ದಿ ನೀಡಿದ ಸಿಎಂ
18:19 March 19
ಸ್ಯಾಂಡಲ್ವುಡ್ಗೆ ರಿಲೀಫ್ ನೀಡಿದ ಸಿಎಂ ಬಿಎಸ್ವೈ
ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹೆಚ್ಚಳದಿಂದಾಗಿ ಸಿನಿಮಾ ಮಂದಿರಕ್ಕೆ ಪ್ರೇಕ್ಷಕರ ಪ್ರವೇಶ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ, ಈಗಿರುವ ಶೇ. 100 ರ ಬದಲು ಶೇ. 50 ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗುತ್ತದೆ ಎನ್ನುವ ಚರ್ಚೆ ಆರಂಭಗೊಂಡಿತ್ತು. ಈ ಸಂಬಂಧ ಚಿತ್ರರಂಗದ ನಿಯೋಗ ನಾಳೆ ಸಿಎಂ ಯಡಿಯೂರಪ್ಪ ಭೇಟಿಗೆ ನಿರ್ಧರಿಸಿತ್ತು. ಅದರ ನಡುವೆಯೇ ಸಿಎಂ ಟ್ವೀಟ್ ಮಾಡಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಸಿಎಂ ಟ್ವೀಟ್ನಿಂದ ಸಿನಿಮಾ ಮಂದಿ ನಿಟ್ಟುಸಿರು ಬಿಟ್ಟಿದ್ದು, ಬಿಎಸ್ವೈ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.