ಬೆಂಗಳೂರು:ತಮ್ಮ ಕುಟುಂಬದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿರುವ ಕುರಿತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ ತಂಗಿದ್ದ ಕುಮಾರಸ್ವಾಮಿ ಅವರು ಇಂದು ಸಂಜೆ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಸಿದ್ದರಾಮಯ್ಯ ಆರೋಪಿಸಿರುವ ಕುರಿತು ವರದಿಗಾರರು ಕೇಳಿದಾಗ ಏನೂ ಪ್ರತಿಕ್ರಿಯಿಸದೆ, ಎಲ್ಲಾ ಆಮೇಲೆ ಹೇಳೋಣ ಎಂದಷ್ಟೇ ಉತ್ತರಿಸಿದರು.
ಸಿದ್ದರಾಮಯ್ಯ ಅವರ ಆರೋಪಗಳಿಗೆ ಸದ್ಯಕ್ಕೆ ಪ್ರತಿಕ್ರಿಯಿಸದಿರಲು ನಿರ್ಧರಿಸಿರುವ ಕುಮಾರಸ್ವಾಮಿ ಅವರು, ಎಲ್ಲ ಮಾಹಿತಿಯನ್ನೂ ಸಂಗ್ರಹಿಸಿದ ಬಳಿಕ ಹೆಚ್ಡಿಕೆ ಸುದ್ದಿಗೋಷ್ಟಿ ನಡೆಸಲಿದ್ದಾರೆ ಎನ್ನಲಾಗ್ತಿದೆ.
ಪ್ರತಿಕ್ರಿಯೆ: ಬಿಜೆಪಿ ಬಗ್ಗೆ ನಾನ್ಯಾಕೆ ಮೃದುವಾಗಿ ಮಾತನಾಡಬೇಕು?. ಯಡಿಯೂರಪ್ಪ ಯಾವುದೇ ತನಿಖೆ ಬೇಕಾದರು ನಡೆಸಲಿ. ಫೋನ್ ಟ್ಯಾಪಿಂಗ್ ವಿಚಾರದಲ್ಲಿ ಯಾವುದೇ ಆತಂಕ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ರಾಜಕೀಯವಾಗಿ ನನ್ನ ನೈತಿಕತೆ ಉಳಿಸಿಕೊಂಡಿದ್ದೇನೆ. ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಯಾರಿಗೂ ಹೆದರುವವನಲ್ಲ. ಅಪ್ಪ, ಮಗ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಯಡಿಯೂರಪ್ಪ ಅವರ ವಿರುದ್ಧ ಗಂಭೀರವಾಗಿ ಆರೋಪಿಸಿರುವ ಮಾಜಿ ಸಿಎಂ, ವರ್ಗಾವಣೆಯಲ್ಲಿ ಎಷ್ಟು ಪೇಮೆಂಟ್ ಆಯ್ತು?. ನಾನು ಕಾಣದೆ ಇರೋದಾ ಎಂದು ಕಿಡಿಕಾರಿದ್ದಾರೆ.
ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಪದ್ಮನಾಭ ನಗರದಲ್ಲಿರುವ ಸಹೋದರಿ ಅನುಸೂಯ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಹೊತ್ತು ಕಾಲ ಕಳೆದರು. ನಂತರ ಅಲ್ಲಿಂದ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಜೆಪಿ ನಗರದಲ್ಲಿನ ತಮ್ಮ ನಿವಾಸಕ್ಕೆ ಹೆಚ್ಡಿಕೆ ತೆರಳಿದ್ರು.