ಬೆಂಗಳೂರು:ರಾಜ್ಯದಲ್ಲಿ ಯಾವ ನಾಯಕತ್ವವೂ ಬದಲಾಗುವುದಿಲ್ಲ ಎಂದು ಪಕ್ಷದ ವರಿಷ್ಠರು ಹೇಳಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ ಎಂದು ವರಿಷ್ಠರು ಈಗಾಗಲೇ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡುವುದು ಪ್ರಸ್ತುತವಲ್ಲ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ರಾಜ್ಯಾಧ್ಯಕ್ಷರು ಈ ಬಗ್ಗೆ ಗಮನಹರಿಸುತ್ತಾರೆ ಎಂದು ಹೇಳಿದರು.
ರಾತ್ರಿ ಕರ್ಪ್ಯೂ ವಿಚಾರ:
ಜನರ ಹಿತ ಗಮನದಲ್ಲಿಟ್ಟುಕೊಂಡು ರಾತ್ರಿ ಕರ್ಪ್ಯೂ ಜಾರಿಗೆ ತರಲಾಗಿತ್ತು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಕಾರಣ ನಿರ್ಧಾರವನ್ನು ವಾಪಸ್ ಪಡೆಯಲಾಗಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.
ಅವಶ್ಯಕತೆ ಆಧಾರಿತವಾಗಿ ಇಂತಹ ಘೋಷಣೆಗಳನ್ನು ಮಾಡಲಾಗಿದೆ. ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಂಡರೆ ಕೋವಿಡ್- 19 ನಿಯಂತ್ರಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಓದಿ: ಎಪಿಎಂಸಿ ಕಾಯ್ದೆ ಕೆಲ ಸ್ವಾರ್ಥಿಗಳು ವಿರೋಧಿಸುತ್ತಿದ್ದಾರೆ: ಸಿಎಂ ಕಿಡಿ