ಬೆಂಗಳೂರು:ಎನ್‌ಆರ್‌ಸಿ ಪಟ್ಟಿಯನ್ನು(ರಾಷ್ಟ್ರೀಯ ಪೌರತ್ವ ನೋಂದಣಿ) ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಎನ್‌ಆರ್‌ಸಿ ನೀತಿಯನ್ನು ಭಾರತ ಸರ್ಕಾರ ನಿರ್ಧಾರ ಮಾಡುತ್ತದೆ. ನಾವು ಸದ್ಯಕ್ಕೆ ರಾಜ್ಯದಲ್ಲಿ ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ, ಆ ಮಾಹಿತಿಯನ್ನು ಕೇಂದ್ರದ ಗೃಹ ಸಚಿವರಿಗೆ ಕಳಿಸುತ್ತೇವೆ. ಗೃಹ ಸಚಿವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.