ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದ ಖದೀಮನೋರ್ವ ಏಕಾಏಕಿ ಲಾಂಗ್ ತೋರಿಸಿ ಹಣದ ಬ್ಯಾಗ್ ಕಸಿಯುವ ವಿಫಲ ಯತ್ನ ನಡೆಸಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಎರಡು ದಿನಗಳ ಹಿಂದೆ ಮೈಸೂರು ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಮುಂದೆ ವಿಳಾಸ ಕೇಳುವ ಸೋಗಿನಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದ ವ್ಯಕ್ತಿಯೊಬ್ಬ, ಸಿಬ್ಬಂದಿಯೊಂದಿಗೆ ಮಾತಿಗಿಳಿದಿದ್ದಾನೆ. ಈ ವೇಳೆ ನೋಡು ನೋಡುತ್ತಿದ್ದಂತೆ ಏಕಾಏಕಿ ಲಾಂಗ್ ತೋರಿಸಿ, ಬಂಕ್ ಸಿಬ್ಬಂದಿ ಕೈಯಲ್ಲಿದ್ದ ಹಣದ ಬ್ಯಾಗ್ ಕಸಿದುಕೊಳ್ಳಲು ಮುಂದಾಗಿದ್ದಾನೆ.