ಕರ್ನಾಟಕ

karnataka

ETV Bharat / city

ಈ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ: ಶಿಕ್ಷಕರ ದಿನದಂದು ಸಿಎಂ ಸಿಹಿಸುದ್ದಿ - ಕರ್ನಾಟಕ ಶಿಕ್ಷಕರ ನೇಮಕಾತಿ ಸುದ್ದಿ

ಶಿಕ್ಷಕರ ದಿನಾಚರಣೆ ದಿನವಾದ ಇಂದು ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.

ಸಿಎಂ ಘೋಷಣೆ
ಸಿಎಂ ಘೋಷಣೆ

By

Published : Sep 5, 2021, 7:31 PM IST

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಲು ಕ್ರಮ ವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.

ವಿಧಾನಸೌಧದ ಬಾಂಕ್ವೆಟ್ ಹಾಲ್​​ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದರು.

ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಸ್ತಾಪಿಸಿದ್ದರು. ಈ‌ ಸಂಬಂಧ ಸಿಎಂ ಜೊತೆ ಮಾತನಾಡಿದ್ದೇನೆ ಎಂದು ತಮ್ಮ ಭಾಷಣದ ವೇಳೆ ಉಲ್ಲೇಖಿಸಿದ್ದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸುತ್ತಾ, ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ಹೇಳಿದರು.

ABOUT THE AUTHOR

...view details