ಬೆಂಗಳೂರು: ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಚಿನ್ನದಂಗಡಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಖದೀಮರನ್ನು ಬಂಧಿಸಿದ್ದಾರೆ.
ಚಿನ್ನದಂಗಡಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಖದೀಮರು ಅರೆಸ್ಟ್ - three arrested for gold stolen
ಅಕ್ಟೋಬರ್ 29 ರಂದು ಸಿಟಿ ಮಾರ್ಕೆಟ್ನಲ್ಲಿರುವ ಪ್ರವೀಣ್ ಜ್ಯುವೆಲ್ಲರಿ ಶಾಪ್ನಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಖದೀಮರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂವರು ಖದೀಮರು ಅರೆಸ್ಟ್
ಜಿಖಾರಾಮ್ ದೇವಸಿ, ಅಮರ್ ಸಿಂಗ್ ಹಾಗೂ ಉತ್ತಮ್ ರಾಣಾ ಬಂಧಿತ ಅರೋಪಿಗಳು. ಇವರು ಅಕ್ಟೋಬರ್ 29 ರಂದು ಸಿಟಿ ಮಾರ್ಕೆಟ್ನಲ್ಲಿರುವ ಪ್ರವೀಣ್ ಜ್ಯುವೆಲ್ಲರಿ ಶಾಪ್ನಲ್ಲಿ ಕಳ್ಳತನ ಮಾಡಿದ್ದರು. ಈ ಕುರಿತು ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರು, ಇದೀಗ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 40 ಲಕ್ಷದ 25 ಸಾವಿರ ರೂ. ಮೌಲ್ಯದ 533 ಗ್ರಾಂ ಚಿನ್ನಾಭರಣ, 2 ಕೆ.ಜಿ ಬೆಳ್ಳಿ ಹಾಗೂ 4.15 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ.