ಕರ್ನಾಟಕ

karnataka

ETV Bharat / city

ಕದ್ದ ಬೈಕ್‌ಗಳನ್ನೇ ಬಳಸಿ ದರೋಡೆ ನಡೆಸುತ್ತಿದ್ದ ಮೂವರು ಖದೀಮರು ಅಂದರ್ - ಇಬ್ಬರು ಪರಾರಿ​!

ಮನೆಗಳ ಎದುರು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್​ಗಳನ್ನು ಕಳವು ಮಾಡಿ ನಂತರ ಆವುಗಳನ್ನೇ ಬಳಸಿಕೊಂಡು ಒಂಟಿಯಾಗಿ ಹೋಗುವ ಸಾರ್ವಜನಿಕರಿಂದ ಮೊಬೈಲ್​ಗಳನ್ನು ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

three arrested under robbery case at bangalore
ಬೆಂಗಳೂರಿನಲ್ಲಿ ದರೋಡೆಕೋರರ ಬಂಧನ

By

Published : Feb 1, 2022, 7:17 AM IST

ಬೆಂಗಳೂರು: ಕದ್ದ ಬೈಕ್​ಗಳನ್ನೇ ಬಳಸಿಕೊಂಡು ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರದ ಪೂರ್ವ ವಿಭಾಗದ ಗೋವಿಂದರಾಜನಗರ ಠಾಣೆಯ ಪೊಲೀಸರು ಬಂಧಿಸಿ 6 ದ್ವಿಚಕ್ರ ವಾಹನ ಹಾಗೂ 6 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆದರ್ಶ, ಅಶೋಕ್, ವಿಜಯ್ ಬಂಧಿತ ಆರೋಪಿಗಳು.

ಮನೆಗಳ ಎದುರು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್​ಗಳನ್ನು ಕಳವು ಮಾಡಿ ನಂತರ ಆವುಗಳನ್ನೇ ಬಳಸಿಕೊಂಡು ಒಂಟಿಯಾಗಿ ಹೋಗುವ ಸಾರ್ವಜನಿಕರಿಂದ ಮೊಬೈಲ್​ಗಳನ್ನು ದರೋಡೆ ಮಾಡುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಿಂದ ವಶಪಡಿಸಿಕೊಂಡ ಬೈಕ್​ಗಳು

ಜನವರಿ 30ರಂದು ಐದು ಮಂದಿ ದರೋಡೆಗೆ ಸಂಚು ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಇನ್ಸ್​​ಪೆಕ್ಟರ್ ಬ್ರಿಜೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿ ಕಾರ್ಯಾಚರಣೆ ನಡೆಸಿ ಸ್ಥಳದಲ್ಲಿಯೇ ಮೂವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 3 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳು ಹಾಗೂ ವಿವಿಧ ಕಂಪನಿಯ 6 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಬೇಲೂರು, ಹಳೆಬೀಡು, ಸೋಮನಾಥಪುರದ ಹೊಯ್ಸಳ ದೇಗುಲಗಳು ವಿಶ್ವ ಪಾರಂಪರಿಕ ಪಟ್ಟಿಗೆ ನಾಮನಿರ್ದೇಶನ

ವಿವಿಧ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ:ನಗರದ ತಲಘಟ್ಟಪುರ, ವಿಜಯನಗರ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿಯೂ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details