ಕರ್ನಾಟಕ

karnataka

ETV Bharat / city

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ - ಹವಾಮಾನ ಇಲಾಖೆ ಮಳೆ ವರದಿ

ಸೈಕ್ಲೋನಿಕ್ ಮಾರುತಗಳ ಪ್ರಭಾವದಿಂದ ಡಿಸೆಂಬರ್ 15ರವರೆಗೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

rainfall
rainfall

By

Published : Dec 12, 2021, 12:11 PM IST

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 15ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಸೈಕ್ಲೋನಿಕ್ ಮಾರುತಗಳ ಪ್ರಭಾವದಿಂದ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಇನ್ನೆರಡು ದಿನ ಒಣ ಹವೆ ಇರಲಿದ್ದು, ಮಲೆನಾಡಿನಲ್ಲಿ ಮಳೆ ಮುಂದುವರೆಯಲಿದೆ. ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಉಳಿದ ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ನೆಲಮಂಗಲ, ಹೆಸರಘಟ್ಟ, ನುಗ್ಗೇನಹಳ್ಳಿ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಆಲೂರು, ಅರಸೀಕೆರೆ, ಕೆ ಆರ್ ಪೇಟೆ, ಪಾಂಡವಪುರ, ಮಲವಳ್ಳಿ, ಮಂಡ್ಯ, ರಾಯಲ್ಪಾಡು, ಬೆಂಗಳೂರು ಕೆಐಎಎಲ್‌, ಐಟಿಸಿ ಜಾಲ, ಶಿಡ್ಲಘಟ್ಟ, ತಿಪಟೂರು, ತುಮಕೂರಿನಲ್ಲಿ ನಿನ್ನೆ ಸಾಕಷ್ಟು ಮಳೆಯಾಗಿದೆ.

ಬೆಂಗಳೂರು ವಾತಾವರಣ:

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ. ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ ಕೆಐಎಎಲ್‌ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ವಾತಾವರಣ:

ಮುಂದಿನ 24 ಗಂಟೆ ರಾಜ್ಯದಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸ್ವಲ್ಪ ಒಣಹವೆ ಇರುವ ಸಾಧ್ಯತೆ ಇದೆ ಎಂದೂ ಹೇಳಿದೆ.

ABOUT THE AUTHOR

...view details