ಬೆಂಗಳೂರು:ತಮ್ಮ ಮನೆ ಹಾಗೂ ಶಿಕ್ಷಣ ಸಂಸ್ಥೆ ಮೇಲೆ ನಡೆದಿದ್ದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ನೀಡಿದ ಸಮನ್ಸ್ ಹಿನ್ನೆಲೆ ಮಾಜಿ ಡಿಸಿಎಂ ಪರಮೇಶ್ವರ್ ಇಂದು ಕ್ವೀನ್ಸ್ ರಸ್ತೆಯ ಬಳಿ ಇರುವ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.
ಸತತ ಮೂರು ಗಂಟೆ ಕಾಲ ಐಟಿ ವಿಚಾರಣೆ ಎದುರಿಸಿದ ಬಳಿಕ ಪರಮೇಶ್ವರ್ ಹೇಳಿದ್ದೇನು?
ತಮ್ಮ ಮನೆ ಹಾಗೂ ಶಿಕ್ಷಣ ಸಂಸ್ಥೆ ಮೇಲೆ ನಡೆದಿದ್ದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ನೀಡಿದ ಸಮನ್ಸ್ ಹಿನ್ನೆಲೆ ಮಾಜಿ ಡಿಸಿಎಂ ಪರಮೇಶ್ವರ್ ಇಂದು ಕ್ವೀನ್ಸ್ ರಸ್ತೆಯ ಬಳಿ ಇರುವ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.
ಸತತ ಮೂರು ಗಂಟೆಗಳ ಕಾಲ ಐಟಿ ಅಧಿಕಾರಿಗಳ ತನಿಖೆ ಎದುರಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಐಟಿ ಅಧಿಕಾರಿಗಳು ಕೇಳಿದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮತ್ತು ಬ್ಯಾಂಕ್ ವಹಿವಾಟಿಗೆ ಸಂಬಂಧಿಸಿದಂತೆ ಉತ್ತರ ನೀಡಿದ್ದೇನೆ. ಇವತ್ತು ಅಧಿಕಾರಿಗಳು ವಿಚಾರಣೆಗೆ ಬರುವಂತೆ ಸೂಚನೆ ನೀಡಿದ್ರು. ಅದಕ್ಕೆ ಬಂದಿದ್ದೆ. ಐಟಿ ಅಧಿಕಾರಿಗಳು ಕೆಲ ಪ್ರಶ್ನೆಗಳನ್ನ ಕೇಳಿದ್ರು. ಅದಕ್ಕೆ ದಾಖಲೆ ಸಮೇತ ಉತ್ತರ ಕೊಟ್ಟಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದರು.
ಇನ್ನು ಐಟಿ ಅಧಿಕಾರಿಗಳು ಯಾವ ಪ್ರಶ್ನೆ ಕೇಳಿದ್ರು ಅಂತಾ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಹಾಗೆಯೇ ನನ್ನ ಅಣ್ಣ, ಮಗನ ಆಪ್ತರ ಮನೆ ಮೇಲೆಯೂ ಸಹ ದಾಳಿ ನಡೆದಿದ್ದು, ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರೆ ಎಂದರು.