ಬೆಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 14 ಕೆ.ಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಕೆಂಗೇರಿಯಲ್ಲಿ ಓರ್ವನ ಬಂಧನ:ಆಂಧ್ರಪ್ರದೇಶದಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಸುನೀಲ್ ಎಂಬಾತನನ್ನು ಬಂಧಿಸಿರುವ ಪೊಲೀಸರು 10 ಕೆ.ಜಿ 200 ಗ್ರಾಂ ಗಾಂಜಾ ಜೊತೆ 500 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
ಫೆಬ್ರವರಿ 7 ರಂದು ಬೆಳಗ್ಗೆ ಇನ್ಸ್ಪೆಕ್ಟರ್ ವಸಂತ್ ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.