ಕರ್ನಾಟಕ

karnataka

ETV Bharat / city

ಶರಣರ ನಾಡಿನಲ್ಲಿ ಕೊರೊನಾ ಕ್ರೂರ ನರ್ತನ : ಮತ್ತೆ 3 ಸೋಂಕಿತ ಪ್ರಕರಣ ದಾಖಲು

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಮತ್ತೆ ಕಲಬುರಗಿ ಜಿಲ್ಲೆಯಲ್ಲಿ ಮೂರು ಕೋವಿಡ್​-19 ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

three-more-corona-virus-cases-found-in-kalaburagi
ಕಲಬುರಗಿ ಕೊರೊನಾ ವೈರಸ್ ಪ್ರಕರಣಗಳು

By

Published : Apr 14, 2020, 1:55 PM IST

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

10 ವರ್ಷದ ಬಾಲಕಿ, 35 ವರ್ಷದ ಮಹಿಳೆ ಹಾಗೂ 51 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವದು ದೃಢಪಟ್ಟಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು ಮೂರು ಸಾವಾಗಿದ್ದು, ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.

ಸೋಂಕಿತರ ಚಲನವಲನ

10 ವರ್ಷದ ಬಾಲಕಿ ಹಾಗೂ 35 ವರ್ಷದ ಮಹಿಳೆ ಪೇಷಂಟ್ ಸಂಖ್ಯೆ 177ರ ಜೊತೆಯಲ್ಲಿ ಸಂಪರ್ಕದಲ್ಲಿದ್ದರು. ಈಗಾಗಲೇ ಪೇಷಂಟ್ 177 ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಅದರಂತೆ 205 ಸಂಖ್ಯೆಯ ರೋಗಿಯ ಸಹೋದರ 51 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಪೇಷಂಟ್ ಸಂಖ್ಯೆ -205 ವ್ಯಕ್ತಿ ಕೂಡಾ ಈಗಾಗಲೇ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ. ಸೋಂಕಿತರನ್ನು ಇಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ABOUT THE AUTHOR

...view details