ಬೆಂಗಳೂರು: ಕರ್ನಾಟಕದಲ್ಲಿ ದಿನಕ್ಕೆ ಮೂರು ಸಾವಿರ ಕೆ.ಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ದಿನಕ್ಕೆ ರಾಜ್ಯದಲ್ಲಿ ಉತ್ಪಾದನೆಯಾಗುವ ಕೊರೊನಾ ತ್ಯಾಜ್ಯ ಎಷ್ಟು ಅನ್ನೋ ಲೆಕ್ಕ ಕೇಳಿದರೆ!!?
ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಬಳಸುವ ಮಾಸ್ಕ್, ಪಿಪಿಇ ಕಿಟ್, ಕೈಗವಸು ಸೇರಿದಂತೆ ರಾಜ್ಯದಲ್ಲಿ ಮೂರು ಟನ್ ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಟ್ವಿಟರ್ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುಧಾಕರ್ ಮಾಸ್ಕ್, ಪಿಪಿಇ ಕಿಟ್, ಕೈಗವಸಗಳು ತ್ಯಾಜ್ಯದ ಮೂಲವಾಗಿದ್ದು. ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ, ವಿಲೇವಾರಿ ಕ್ಲಿಷ್ಟಕರವಾಗಿದ್ದು, ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆ ರೂಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ಕಳೆದ 10 ದಿನಗಳಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾದಗಿರಿಯಲ್ಲಿ ಅತಿ ಹೆಚ್ಚು ಸೋಂಕು ಪರೀಕ್ಷೆ ಮಾಡಲಾಗಿದೆ. ಇಲ್ಲಿ 7,297 ಮಂದಿಗೆ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಎರಡನೇ ಸ್ಥಾನದಲ್ಲಿ ಕಲಬುರಗಿ ಜಿಲ್ಲೆಯಿದೆ ಎಂದು ಟ್ವಿಟರ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.