ಕರ್ನಾಟಕ

karnataka

ETV Bharat / city

ಶಾಲಾ ಶುಲ್ಕ ನಿಗದಿ ವಿವಾದ: ಆಕ್ಷೇಪಣೆ ಸಲ್ಲಿಕೆಗೆ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಕಾಲಾವಕಾಶ - ಖಾಸಗಿ ಶಾಲೆಗಳ ಒಕ್ಕೂಟ

ಖಾಸಗಿ ಶಾಲೆಗಳ ಶುಲ್ಕದಲ್ಲಿ ಶೇ.30 ರಷ್ಟನ್ನು ಕಡಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿರುವ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು.

hc
hc

By

Published : Jun 21, 2021, 10:26 PM IST

ಬೆಂಗಳೂರು:ಶಾಲಾ ಶುಲ್ಕ ನಿಗದಿ ವಿವಾದ ಬಗೆಹರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲು ಅನುಮತಿ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಖಾಸಗಿ ಶಾಲೆಗಳಿಗೆ ಜೂನ್ 29ರವರೆಗೆ ಕಾಲಾವಕಾಶ ನೀಡಿದೆ.

ಖಾಸಗಿ ಶಾಲೆಗಳ ಶುಲ್ಕದಲ್ಲಿ ಶೇ.30 ರಷ್ಟನ್ನು ಕಡಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

ಈ ವೇಳೆ ಖಾಸಗಿ ಶಾಲೆಗಳ ಪರ ವಕೀಲರು ಸರ್ಕಾರದ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಮನವಿ ಪರಿಗಣಿಸಿದ ಪೀಠ, ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜೂನ್ 29ರವರೆಗೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ, ಖಾಸಗಿ ಶಾಲೆಗಳಿಗೆ ಶೇ.70ರಷ್ಟು ಮಾತ್ರ ಶುಲ್ಕ ಪಡೆಯುವಂತೆ ಹಾಗೂ ಶೇ.30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಆದೇಶಿಸಿದೆ. ಆದರೆ, ಈ ಆದೇಶವನ್ನು ಒಪ್ಪದ ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಈ ಸಂಬಂಧ ಮಧ್ಯಂತರ ಅರ್ಜಿ ಸಲ್ಲಿಸಿರುವ ಸರ್ಕಾರ, ಕೋವಿಡ್ ಪರಿಸ್ಥಿತಿಯಿಂದ ರ್ಪೂಣ ಶುಲ್ಕ ಭರಿಸಲು ಪಾಲಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಸಲಹೆ ಸೂಚನೆ ನೀಡಲು ಹೈಕೋರ್ಟ್​ನ ನಿವೃತ್ತ ನ್ಯಾಯಮೂತಿರ್ಗಳ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ರಚನೆ ಮಾಡುವುದಕ್ಕೆ ನಿರ್ಧರಿಸಲಾಗಿದೆ.

ಆ ಸಮಿತಿ ಸೂಚನೆ ಪರಿಗಣಿಸಿ ಶುಲ್ಕ ನಿಗದಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಆದ್ದರಿಂದ ಸಮಿತಿ ರಚನೆ ಮಾಡಲು ಅನುಮತಿ ನೀಡಬೇಕು ಎಂದು ಸರ್ಕಾರ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿದೆ.

ABOUT THE AUTHOR

...view details