ಬೆಂಗಳೂರು: ರಾಜಧಾನಿಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೆ ವರುಣರಾಯನ ಆರ್ಭಟ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಸಹ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿಯಲ್ಲಿ ವರುಣನಾರ್ಭಟ: ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ - ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ
ವಸಂತನಗರ, ರಾಜಾಜಿನಗರ, ಮಲೇಶ್ವರ ಸೇರಿದಂತೆ ನಗರದ ಹಲವೆಡೆ ಗುಡುಗು ಸಹಿತ ವರ್ಷಧಾರೆಯಾಗುತ್ತಿದೆ. ಗುಡುಗು ಮಿಂಚು ಗಾಳಿ ಸಹಿತ ಮಳೆಗೆ ಹಲವು ಬಡಾವಣೆಗಳಲ್ಲಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಟ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದ್ದು, ಇಂದು ಮಧ್ಯಾಹ್ನ ಸುಮಾರು 3 ಗಂಟೆಯಿಂದ ಭಾರಿ ಮಳೆ ಪ್ರಾರಂಭವಾಗಿದೆ. ವಸಂತನಗರ, ರಾಜಾಜಿನಗರ, ಮಲೇಶ್ವರ ಸೇರಿದಂತೆ ನಗರದ ಹಲವೆಡೆ ಗುಡುಗು ಸಹಿತ ವರ್ಷಧಾರೆಯಾಗುತ್ತಿದೆ. ಗಾಳಿ ಸಹಿತ ಮಳೆಗೆ ಹಲವು ಬಡಾವಣೆಗಳಲ್ಲಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಟ ನಡೆಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುತ್ತಿದ್ದು, ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಎಡಬಿಡದಂತೆ ಮಳೆ ಸುರಿಯುತ್ತಿದೆ. ರಾಜಧಾನಿಯಲ್ಲಿಯೂ ಇನ್ನೆರಡು ದಿನ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ ನೀಡಿದ್ದಾರೆ.