ರೆಬಲ್ಸ್ಟಾರ್ ಅಂಬರೀಶ್ ನಮ್ಮನ್ನಗಲಿ ಇಂದಿಗೆ 8 ತಿಂಗಳಾಯಿತು. ಎಂಟನೇ ತಿಂಗಳ ಪುಣ್ಯಸ್ಮರಣೆ ನಿಮಿತ್ತ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿ ಬಳಿ ಸುಮಲತಾ ಅನುಪಸ್ಥಿತಿಯಲ್ಲಿ ಅಂಬಿ ಪುತ್ರ ಅಭಿಷೇಕ್ ಅಂಬರೀಶ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದರು.
ಇಂದು ಅಂಬಿ 8ನೇ ತಿಂಗಳ ಪುಣ್ಯ ಸ್ಮರಣೆ.... ಸುಮಲತಾ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅಭಿ - undefined
ಕಳೆದ ವರ್ಷ ನವೆಂಬರ್ 24 ರಂದು ರೆಬಲ್ ಸ್ಟಾರ್ ಅಂಬರೀಶ್ ನಮ್ಮನ್ನು ಅಗಲಿದ್ದು, ಇಂದು ಅವರ 8ನೇ ಪುಣ್ಯತಿಥಿಯನ್ನು ಆಚರಿಸಲಾಗಿದೆ. ಸುಮಲತಾ ಅವರ ಅನುಪಸ್ಥಿತಿಯಲ್ಲಿ ಅಭಿಷೇಕ್ ಅಂಬರೀಶ್ ಅಂಬಿ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದರು.
ಸುಮಲತಾ ಅಂಬರೀಶ್ ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿ ಮಾಡುವ ಸಲುವಾಗಿ ದೆಹಲಿಗೆ ಹೋಗಿರುವ ಕಾರಣ ಇಂದು ಅಂಬಿ ಸಮಾಧಿ ಬಳಿ ಆಗಮಿಸಿರಲಿಲ್ಲ. ಪ್ರತಿ ತಿಂಗಳಂತೆ ಈ ಬಾರಿ ಕೂಡಾ ಅಂಬಿ ಸಮಾಧಿ ಬಳಿ ಇಷ್ಟವಾದ ತಿಂಡಿ ತಿನಿಸುಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಈ ವೇಳೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅಭಿಗೆ ಸಾಥ್ ನೀಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅಭಿಷೇಕ್ ಅಂಬರೀಶ್, ಸಂಸದರಾದ ಬಳಿಕ ಅಮ್ಮನಿಗೆ ಜವಾಬ್ದಾರಿ ಹೆಚ್ಚಾಗಿದೆ. ಹಾಗಾಗಿ ಕೆಲಸದ ನಿಮಿತ್ತ ಅವರು ದೆಹಲಿಗೆ ತೆರಳಿದ್ದಾರೆ. ನನಗಿಂತ ಹೆಚ್ಚಾಗಿ ಅಪ್ಪನನ್ನು ಅಮ್ಮ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇನ್ನು ರಾಜಕೀಯದ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ ಎಂದು ಹೇಳುವ ಮೂಲಕ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರು.