ಬೆಂಗಳೂರು:ರಾಜ್ಯದಲ್ಲಿಂದು 746 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,29,552ಕ್ಕೆ ಏರಿಕೆ ಆಗಿದೆ.
ಇಂದು ಮೂವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12,152ಕ್ಕೆ ಏರಿಕೆಯಾಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. 765 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,08,494 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 193 ಜನರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ರಾಜ್ಯದಲ್ಲಿ 8,887 ಸಕ್ರಿಯ ಪ್ರಕರಣಗಳು ಬಾಕಿ ಇವೆ.
ಓದಿ: ಸ್ಪಲ್ಪದರಲ್ಲೇ ತಪ್ಪಿದ ಭಾರೀ ಅನಾಹುತ.. ಹಿಮದ ರಾಶಿಗೆ ಇಂಡಿಗೋ ವಿಮಾನ ಡಿಕ್ಕಿ
ಕಳೆದ 7 ದಿನಗಳಲ್ಲಿ 23,419 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದು, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 55,032 ಮಂದಿ ಇದ್ದಾರೆ. ದ್ವಿತೀಯ ಸಂಪರ್ಕದಲ್ಲಿ 61,818 ಜನರಿದ್ದು, ವಿಮಾನ ನಿಲ್ದಾಣದಿಂದ 489 ಪ್ರಯಾಣಿಕರು ಆಗಮಿಸಿ ತಪಾಸಣೆಗೊಳಪಟ್ಟಿದ್ದಾರೆ.
ಈವರೆಗೆ ಯುಕೆಯಿಂದ ಬಂದ 46 ಮಂದಿಗೆ ಪಾಸಿಟಿವ್ ಆಗಿದ್ದು, ಇವರ ಸಂಪರ್ಕದಲ್ಲಿದ್ದ 26 ಮಂದಿಗೂ ಸೋಂಕು ದೃಢವಾಗಿದೆ. ಇನ್ನು ಯುಕೆಯಿಂದ ಬಂದವರಲ್ಲಿ 13 ಜನಕ್ಕೆ ರೂಪಾಂತರ ಕೊರೊನಾ ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.