ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ತಮ್ಮ 49 ನೇ ಹುಟ್ಟುಹಬ್ಬದ ಪ್ರಯುಕ್ತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಮ್ಮುಖದಲ್ಲಿ ನೆರೆ ಸಂತ್ರಸ್ತರಿಗೆ ಧನ ಸಹಾಯ ನೀಡುವ ಮೂಲಕ ಸಂತ್ರಸ್ತರಿಗೆ ನೆರವಾದರು.
ಹುಟ್ಟುಹಬ್ಬ: ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ ಪರಿಷತ್ ಸದಸ್ಯ - ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ
ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ತಮ್ಮ 49 ನೇ ಹುಟ್ಟುಹಬ್ಬದ ನಿಮಿತ್ತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಮ್ಮುಖದಲ್ಲಿ ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದರು.
![ಹುಟ್ಟುಹಬ್ಬ: ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ ಪರಿಷತ್ ಸದಸ್ಯ](https://etvbharatimages.akamaized.net/etvbharat/prod-images/768-512-4245907-thumbnail-3x2-lekh.jpg)
ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಮನೆಯನ್ನು ಕಳೆದುಕೊಂಡ ಮೂರು ಕುಟುಂಬದವರಿಗೆ ಒಂದೂವರೆ ಲಕ್ಷ ರೂ. ಚೆಕ್ ಅನ್ನು ದೇವೇಗೌಡರು ವಿತರಿಸಿದರು. ಇದೇ ವೇಳೆ ಶರವಣ ಅವರು ಯಾವುದೇ ಆಡಂಬರವಿಲ್ಲದೇ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದರು.
Last Updated : Aug 26, 2019, 3:36 PM IST