ಕರ್ನಾಟಕ

karnataka

ETV Bharat / city

ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಕುಮಾರಸ್ವಾಮಿ ಭೇಟಿ - ಕುಮಾರಸ್ವಾಮಿಗೆ ಅನಾರೋಗ್ಯ

ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು, ಅನಾರೋಗ್ಯವಿದ್ದರೂ ನನ್ನ ಮನಸ್ಸು ತುಡಿಯುತ್ತಿದೆ. ಆದ್ದರಿಂದ ನಾಳೆಯಿಂದ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Tomorrow Kumaraswamy visits flood affected areas

By

Published : Aug 10, 2019, 1:35 AM IST

ಬೆಂಗಳೂರು: ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು, ಅನಾರೋಗ್ಯವಿದ್ದರೂ ನನ್ನ ಮನಸ್ಸು ತುಡಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶನಿವಾರ ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ಕೊಟ್ಟು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಬೆಳಗ್ಗೆ 8ಗಂಟೆಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿರುವ ಕುಮಾರಸ್ವಾಮಿ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅಲ್ಲಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ.

ABOUT THE AUTHOR

...view details