ಬೆಂಗಳೂರು: ನಾಳೆಯಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ಆರಂಭಿಸಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರ್. ಅಶೋಕ್ ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿgಳನ್ನು ತೆರೆಯಲಾಗಿವೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಆಗಿರಲಿಲ್ಲ, ಸೀಲ್ ಡೌನ್ ಪ್ರದೇಶದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯುವಂತಿಲ್ಲ. ಉಳಿದಂತೆ ಎಲ್ಲಾ ಕಡೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಆದರೂ ಕೂಡ ಯಾರು ಬರುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಓಪನ್ ಆದ ಕೂಡಲೇ ಬರೋಕೆ ಅದೇನು ಹೋಟೆಲ್ ಅಲ್ಲ, ಇನ್ನೂ ಹತ್ತು ದಿನಗಳಲ್ಲಿ ಎಲ್ಲವೂ ಸರಿ ಆಗಲಿದೆ ಎಂದರು.
ಇನ್ನು, ಕಟ್ಟಡ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಬಿಲ್ಡರ್ಗಳ ಜೊತೆ ಸಭೆ ನಡೆಸಲಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ಹಾಕಲು ಬೆಂಗಳೂರು ನಗರದ ಬಹುತೇಕ ರಸ್ತೆಗಳಲ್ಲಿ ಗುಂಡಿ ತೆರೆಯಲಾಗಿತ್ತು. ಅದನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.