ಕರ್ನಾಟಕ

karnataka

ಕೋವಿಡ್ 3ನೇ ಅಲೆ ತಡೆಗೆ ಕಠಿಣ ಕ್ರಮ: ಸಚಿವ ಆರ್​​.ಅಶೋಕ್

By

Published : Dec 9, 2021, 1:14 PM IST

ಕೋವಿಡ್​​ 2ನೇ ಅಲೆಯಿಂದ ನಾವು ಪಾಠ ಕಲಿತಿದ್ದೇವೆ. ಆ ವೇಳೆಯಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿವೆ. 3ನೇ ಅಲೆ ಮತ್ತೆ ಬರಬಾರದು. ಜನರನ್ನು ರಕ್ಷಣೆ ಮಾಡುವ ಕೆಲಸ ಸರ್ಕಾರ ಮಾಡಲಿದೆ ಎಂದು ಸಚಿವ ಆರ್​​.ಅಶೋಕ್​​ ಹೇಳಿದರು.

Minister R. Ashok
ಸಚಿವ ಆರ್​​. ಅಶೋಕ್

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಗಾಗಿ, 3ನೇ ಅಲೆ ಬಾರದಂತೆ ಕಠಿಣ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.


ವಿಧಾನಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ತರುವ ವಿಚಾರದ ಬಗ್ಗೆ ಸಂಪುಟ ಸಭೆಯಲ್ಲಿ ಸಮಾಲೋಚನೆ ಮಾಡಲಾಗುತ್ತದೆ. 2ನೇ ಅಲೆಯಿಂದ ನಾವು ಪಾಠ ಕಲಿತಿದ್ದೇವೆ. ಆ ವೇಳೆಯಲ್ಲಿ ಸಾಕಷ್ಟು ಸಾವು- ನೋವು ಸಂಭವಿಸಿವೆ. 3ನೇ ಅಲೆ ಮತ್ತೆ ಬರಬಾರದು. ಜನರನ್ನು ರಕ್ಷಣೆ ಮಾಡುವ ಕೆಲಸ ಸರ್ಕಾರ ಮಾಡಲಿದೆ. ಸೂಕ್ತ ಮುಂಜಾಗೃತ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

ಈಗಾಗಲೇ ಆಸ್ಪತ್ರೆ ಗಳಲ್ಲಿ ಆಕ್ಸಿಜನ್ ಪ್ಲಾಂಟ್ ಹಾಗು ಆಕ್ಸಿಜನ್ ಬೆಡ್​​ಗಳನ್ನು ಸುಸ್ಥಿತಿಯಲ್ಲಿಡಲು ಸೂಚಿಸಿದ್ದೇವೆ. ತಜ್ಞರ ಸಲಹೆಯಂತೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲವೂ ಕಾಂಗ್ರೆಸ್​​ನವರಿಂದ ತಿಳಿದುಕೊಂಡು ಮಾಡಬೇಕಿಲ್ಲ ಎಂದರು.

ಬಿಪಿನ್ ರಾವತ್ ನಿಧನಕ್ಕೆ ಸಂತಾಪ:

ಹೆಲಿಕಾಪ್ಟರ್ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಸಚಿವ ಅಶೋಕ್, ಬಿಪಿನ್ ರಾವತ್ ಪಾಕ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದವರು. ಅವರ ಅಗಲಿಕೆ ನಮಗೆ ನೋವು ತಂದಿದೆ. ರಾವತ್ ಸಾವಿನ ಬಗ್ಗೆ ಪಾಕಿಸ್ತಾನದಲ್ಲಿ ಬಹಳ ವ್ಯಂಗ್ಯ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಂಭ್ರಮಿಸುವುದು ಹೀನ ಮನಸ್ಥಿತಿಯನ್ನು ತೋರಿಸುತ್ತದೆ. ಇಡೀ ದೇಶ ಇಂದು ನೋವಿನಲ್ಲಿದೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಸೋಮಣ್ಣ

ABOUT THE AUTHOR

...view details