ಬೆಂಗಳೂರು:ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ಸಿದ್ಧತೆ ಆರಂಭಿಸಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 14ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ ನಡೆಸಲು ನಿರ್ಧರಿಸಲಾಗಿದೆ.
ಜಿ.ಪಂ., ತಾ.ಪಂ. ಚುನಾವಣಾ ತಯಾರಿ.. ಸಿಎಂ ಬೊಮ್ಮಾಯಿ, ಬಿಎಸ್ ವೈ, ಕಟೀಲ್ ನೇತೃತ್ವದಲ್ಲಿ ರಾಜ್ಯ ಪ್ರವಾಸ - Taluk Panchayath election preperation
ಸಂಘಟನಾ ಪ್ರವಾಸದ ಮೂಲಕ ಬಿಜೆಪಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ತಯಾರಿ ಆರಂಭಿಸಿದೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ನಾಯಕರು ಈ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಕೂಡಾ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ.
ಜಿ.ಪಂ., ತಾ.ಪಂ. ಚುನಾವಣಾ ತಯಾರಿ
ಮೂರು ದಿನಗಳ ಕಾಲ ನಡೆಯಲಿರುವ ರಾಜ್ಯ ಪ್ರವಾಸದಲ್ಲಿ ಬಿಜೆಪಿಯವರು ಪಕ್ಷ ಸಂಘಟಿಸಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ನಾಯಕರು ಈ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಕೂಡಾ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ.
ವಿಭಾಗ ಮಟ್ಟದಲ್ಲಿ ಒಂದು ಸಮಾವೇಶ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸಂಘಟನಾ ಪ್ರವಾಸದ ಮೂಲಕ ಬಿಜೆಪಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ತಯಾರಿ ಆರಂಭಿಸಿದೆ.