ಬೆಂಗಳೂರು :ಸರ್ಕಾರಕ್ಕೆ ಆದಾಯ ತಂದುಕೊಡುವ ಉದ್ಯಮಗಳಿಗೆ ವೀಕೆಂಡ್ ಕರ್ಫ್ಯೂನಿಂದ ಸಾಕಷ್ಟು ನಷ್ಟವಾಗಿತ್ತು. ಇದೀಗ ವೀಕೆಂಡ್ ಕರ್ಫ್ಯೂ ರದ್ದಾಗಿರುವುದಕ್ಕೆ ವ್ಯಾಪಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜಧಾನಿಯ ಹಲವು ಉದ್ಯಮಿಗಳು ಈ ಕುರಿತು ಮಾತನಾಡಿದ್ದು, ಸರ್ಕಾರದ ನಿರ್ಣಯಕ್ಕೆ ಹಾರ್ದಿಕ ಸ್ವಾಗತ ಬಯಸುತ್ತೇವೆ. ಇದು ಎಲ್ಲಾ ಉದ್ಯಮಿಗಳಿಗೆ ರಿಲೀಫ್ ಸಿಕ್ಕಂತಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆದುಕೊಳ್ಳುತ್ತೇವೆ. ನಮ್ಮ ಮನವಿಗೆ ಸ್ಪಂದಿಸಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.
ಸರ್ಕಾರದ ವೀಕೆಂಡ್ ಕರ್ಫ್ಯೂ ರದ್ದತಿ ನಿರ್ಣಯ ಸ್ವಾಗತಿಸಿದ ಉದ್ಯಮಿಗಳು ಇದನ್ನೂ ಓದಿ:ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ಧತಿಗೆ ನಿರ್ಧಾರ.. ರಾತ್ರಿ ನಿಷೇಧಾಜ್ಞೆ ಸೇರಿ ಏನೆಲ್ಲಾ ಮುಂದುವರಿಕೆ?
ಬೆಂಗಳೂರು ಹೋಲ್ ಸೇಲ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ಪ್ರಕಾಶ್ ಪಿರ್ಗಲ್, ಎಫ್‌ಕೆಸಿಸಿಐ ಅಧ್ಯಕ್ಷ ಡಾ. ಐ.ಎಸ್ ಪ್ರಸಾದ್, ಬೆಂಗಳೂರು ಹೋಟೆಲ್ ಉದ್ಯಮಿಗಳ ಸಂಘದ ಅಧ್ಯಕ್ಷ ಪಿ.ಸಿ ರಾವ್, ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ