ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸರಿಗೂ ಮಾಸ್ಕ್ ವಿತರಣೆ ಮಾಡಲಾಗಿದೆ. ಹೆಚ್ಚುವರಿಯಾಗಿ ಮತ್ತೆ 3 ಸಾವಿರ ಮಾಸ್ಕ್ ಖರೀದಿಗೆ ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಮತ್ತೆ 3 ಸಾವಿರ ಮುಖಗವಸು ಖರೀದಿಗೆ ಮುಂದಾದ ಸಂಚಾರ ಪೊಲೀಸರು - ಟ್ರಾಫಿಕ್ ಪೊಲೀಸರಿಗೂ ಮಾಸ್ಕ್ ವಿತರಣೆ
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸರಿಗೂ ಮಾಸ್ಕ್ ವಿತರಣೆ ಮಾಡಲಾಗಿದೆ.
ಮಾಸ್ಕ್ ಖರೀದಿಗೆ ಮುಂದಾದ ಟ್ರಾಫಿಕ್ ಪೊಲೀಸರು
ನಗರದಲ್ಲಿ 4,601 ಟ್ರಾಫಿಕ್ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ತವ್ಯದ ಅವಧಿಯಲ್ಲಿ ಬಹುತೇಕ ರಸ್ತೆಗಳಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯ ಇರಲಿದೆ. ನೂರಾರು ಜನರ ಮಧ್ಯೆ ಇರುವುದರಿಂದ ಸೋಂಕು ತಗುಲುವ ಸಾಧ್ಯತೆ ಇರುತ್ತದೆ.
ಮುನ್ನೆಚ್ಚರಿಕಾ ಕ್ರಮವಾಗಿ 4,500 ಸಂಚಾರಿ ಪೊಲೀಸರಿಗೆ ಎನ್-95 ಮಾಸ್ಕ್ಗಳನ್ನು ಈಗಾಗಲೇ ವಿತರಿಸಲಾಗಿದೆ. ಹೆಚ್ಚುವರಿಯಾಗಿ ಮತ್ತೆ 3000 ಸಾವಿರ ಮಾಸ್ಕ್ ಖರೀದಿಸಲು ಮುಂದಾಗಿದ್ದೇವೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.