ಬೆಂಗಳೂರು:ಪೊಲೀಸ್ ಇಲಾಖೆಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾ ವಾರಿಯರ್ಗಳೂ ಸೋಂಕಿಗೆ ಬಲಿಯಾಗುತ್ತಿದ್ದು ಆತಂಕ ಮೂಡಿಸಿದೆ. 59 ವರ್ಷದ ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಕೊರೊನಾ ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ.
ಪೊಲೀಸ್ ಇಲಾಖೆಗೆ ಕಂಟಕವಾದ ಕೊರೊನಾ: ಬೆಂಗಳೂರಿನಲ್ಲಿ ಸಂಚಾರಿ ಎಎಸ್ಐ ಬಲಿ
ಬೆಂಗಳೂರಿನಲ್ಲಿ ಕೊರೊನಾ ಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಸಂಚಾರಿ ಠಾಣೆಯೊಂದರ ಎಎಸ್ಐ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ
ವಿಲ್ಸನ್ ಗಾರ್ಡನ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಜೂನ್ 18ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇದೇ ಬರುವ ಡಿಸೆಂಬರ್ಗೆ ನಿವೃತ್ತಿಯಾಗಬೇಕಿದ್ದ ಇವರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದರಿಂದ ಎಎಸ್ಐ ಜೊತೆ ಸಂಪರ್ಕ ಹೊಂದಿದವರನ್ನ ಕ್ವಾರಂಟೈನ್ ಮಾಡಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.