ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದ ಟೆಂಪೋ ತಡೆದ ಸಂಘಟನೆಯೊಂದರ ಕಾರ್ಯಕರ್ತರು ಚಾಲಕನನ್ನು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಗೋಮಾಂಸ ಸಾಗಣೆ: ಟೆಂಪೋ ಚಾಲಕ ಪೊಲೀಸ್ ವಶಕ್ಕೆ
ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದ ಟೆಂಪೋವನ್ನ ತಡೆದ ಸಂಘಟನೆಯೊಂದರ ಕಾರ್ಯಕರ್ತರು ಚಾಲಕನನ್ನು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಗೋಮಾಂಸ ಸಾಗಾಣಿಕೆ
ಹಿಂದೂಪುರದಿಂದ ಬೆಂಗಳೂರು ಕಡೆಗೆ ಗೋಮಾಂಸ ತೆಗೆದುಕೊಂಡು ಹೋಗುತ್ತಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಸಂಘಟನೆ ಕಾರ್ಯಕರ್ತರು, ಬೆಂಗಳೂರು ಉತ್ತರ ತಾಲೂಕಿನ ದೊಡ್ಡಜಾಲ ಸಮೀಪದಲ್ಲಿ ಟೆಂಪೋವನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ, ಟೆಂಪೋದಲ್ಲಿ ಒಂದು ಟನ್ಗೂ ಅಧಿಕ ಪ್ರಮಾಣದ ಗೋಮಾಂಸ ಪತ್ತೆಯಾಗಿದ್ದು, ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ಟೆಂಪೋ ಹಾಗೂ ಚಾಲಕನನ್ನು ವಶಕ್ಕೆ ಪಡದುಕೊಂಡಿದ್ದಾರೆ.