ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಮೂವರು ಅಂತರಾಜ್ಯ ಆರೋಪಿಗಳನ್ನು ಬಂಧಿಸಿರುವ ಶ್ರೀರಾಂಪುರ ಠಾಣೆ ಪೊಲೀಸರು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ತ್ರಿಪುರ ರಾಜ್ಯದ ಆರೋಪಿಗಳು ರಾಜಧಾನಿಯಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಈಶಾನ್ಯ ರಾಜ್ಯಗಳಿಂದ ಗಾಂಜಾ ತ೦ದು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಮೆಜಿಸ್ಟಿಕ್ ಕಡೆಗೆ ತೆರಳುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಬಾಲಕೃಷ್ಣ, ಸಬ್ ಇನ್ಸ್ಪೆಕ್ಟರ್ ವಿನೋದ್ ನೇತೃತ್ವದ ಪೊಲೀಸ್ ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದಾರೆ. ಒಂದು ಫ್ಯಾಕ್ಟರಿ ಬಳಿ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿತರಿಂದ 15 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ದ್ವಿಚಕ್ರವಾಹನವನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.