ಬೆಂಗಳೂರು: ರಾಜಧಾನಿಯಿಂದ ಹುಬ್ಬಳ್ಳಿ ಮಾರ್ಗದಲ್ಲಿ ನಡೆಯುತ್ತಿದ್ದ ಜೋಡಿ ಹಳಿ ಕಾಮಗಾರಿಯಿಂದ ಸ್ಥಗಿತಗೊಂಡಿದ್ದ ರೈಲುಗಳ ಸಂಚಾರ ಇಂದಿನಿಂದ ಪುನಃ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.
ಕೆಎಸ್‌ಆರ್ ಬೆಂಗಳೂರು- ಧಾರವಾಡ ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು, ಧಾರವಾಡ - ಕೆಎಸ್‌ಆರ್ ಬೆಂಗಳೂರು ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು ಮತ್ತು ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ವಿಶೇಷ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ.