ಬೆಂಗಳೂರು :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿಬದಿಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳು ಸುರಕ್ಷತೆ, ಸ್ವಚ್ಛತೆ ಮತ್ತು ಗುಣಮಟ್ಟದಿಂದ ಕೂಡಿರಬೇಕು. ಇದು ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಅತ್ಯವಶ್ಯಕವಾಗಿರುತ್ತದೆ ಎಂದು ಪಾಲಿಕೆ ಅಭಿಪ್ರಾಯಪಟ್ಟಿದೆ.
ಇದರಿಂದ ಪಶ್ಚಿಮ ವಲಯದ ಗಾಂಧಿನಗರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಬಡಾವಣೆ, ಗೋವಿಂದರಾಜನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಸಂಸ್ಥೆಯಿಂದ ಆಹಾರ ಸುರಕ್ಷತೆ, ಸ್ವಚ್ಛತೆ ಮತ್ತು ಗುಣಮಟ್ಟದ ವಿಷಯಗಳ ಬಗ್ಗೆ ತರಬೇತಿ ನೀಡಿ ಪ್ರಮಾಣಪತ್ರ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.