ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಪ್ರತಿಭಟನೆ ಕೂಗು ಕೇಳಿ ಬರುತ್ತಿದೆ. ಈ ಹಿಂದೆ ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದರು. ಸರ್ಕಾರದ ಮಾತಿಗೂ ಜಗ್ಗದ ನೌಕರರು ಕಡೆಗೆ ಕೋರ್ಟ್ ಮಧ್ಯಪ್ರವೇಶಕ್ಕೆ ಬಗ್ಗಿ ಕೆಲಸದಲ್ಲಿ ತೊಡಗಿದ್ದರು. ಮೂರು ತಿಂಗಳು ಕಳೆದ ಬಳಿಕ ಇದೀಗ ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕಡೆಯಿಂದ ಫ್ರೀಡಂ ಪಾರ್ಕ್ನಲ್ಲಿ ಸೆಪ್ಟೆಂಬರ್ 20ರಂದು ಧರಣಿ ನಡೆಸಲು ನಿರ್ಧರಿಸಲಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಸೋಮವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ.
ಬೇಡಿಕೆಯೇನು?
- ಏಪ್ರಿಲ್ 2021ರ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲ ಕಾರ್ಮಿಕರನ್ನು ಕೆಲಸಕ್ಕೆ ಪುನರ್ ನೇಮಿಸಬೇಕು.
- ಟ್ರೈನಿ ನೌಕರರನ್ನು ಸೇವೆಯಿಂದ ಕೈಬಿಡಲಾಗಿದ್ದು, ಎಲ್ಲರನ್ನೂ ಪುನರ್ ನೇಮಕ ಮಾಡಬೇಕು.