ಬೆಂಗಳೂರು:ನಗರದ ಹಲವೆಡೆ ರಾತ್ರಿ ಸುರಿದ ಮಳೆಯಿಂದಾಗಿ ಬೃಹತ್ ಮರವೊಂದು ಧರೆಗುರುಳಿದ ಘಟನೆ ಸಿದ್ಧಾಪುರದ ಟಿ.ಮರಿಯಪ್ಪ ರಸ್ತೆಯಲ್ಲಿ ನಡೆದಿದೆ. ಗಾಳಿ ಸಹಿತ ಮಳೆಗೆ ಮರದ ಕೊಂಬೆಯೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನ ಸವಾರನ ಮೇಲೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಸವಾರ ಪಾರಾಗಿದ್ದಾನೆ.
ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ: ಕಾರು, ದ್ವಿಚಕ್ರ ವಾಹನ ಜಖಂ - ಭಾರಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ
ಬೆಂಗಳೂರಿನಲ್ಲಿ ಭಾರಿ ಗಾಳಿ, ಮಳೆಗೆ ಬೃಹತ್ ಮರ ಧರೆಗುರುಳಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು, ದ್ವಿಚಕ್ರ ವಾಹನ ಹಾಗೂ ಆಟೋ ಜಖಂಗೊಂಡಿವೆ.
Tree crashes due to Heavy rain
ಕೆಲವೇ ಸೆಕೆಂಡ್ಗಳ ಅಂತರದಲ್ಲಿ ಬೃಹತ್ ಮರ ಧರೆಗುರುಳಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು, ದ್ವಿಚಕ್ರ ವಾಹನ ಹಾಗೂ ಆಟೋ ಜಖಂಗೊಂಡಿವೆ. ಅಲ್ಲದೇ ವಿದ್ಯುತ್ ತಂತಿಯ ಮೇಲೆ ಮರ ಬಿದ್ದ ಪರಿಣಾಮ ಸುತ್ತಮುತ್ತಲಿನ ಏರಿಯಾಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಬಿಬಿಎಂಪಿ ಹಾಗೂ ಬೆಸ್ಕಾಂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ದೇಶದ ಮೊದಲ ಎಸಿ ರೈಲು ನಿಲ್ದಾಣ ಆರಂಭ: ಹೇಗಿದೆ ಗೊತ್ತಾ?