ಬೆಂಗಳೂರು: ಉಕ್ರೇನ್ - ರಷ್ಯಾ ಯುದ್ಧದ ಶೆಲ್ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿ ಮೂಲದ ವೈದ್ಯ ವಿದ್ಯಾರ್ಥಿ ನವೀನ್ ಮೃತದೇಹವನ್ನು ಉಕ್ರೇನಿನ ಶವಾಗಾರದಲ್ಲಿರಿಸಲಾಗಿದೆ. ರಾಜ್ಯಕ್ಕೆ ಮೃತದೇಹ ತರಲು ಎಲ್ಲ ರೀತಿಯ ಪ್ರಯತ್ನ ಮುಂದುವರೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ವಿಚಾರದಲ್ಲಿ ವಿದೇಶಾಂಗ ವ್ಯವಹಾರ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ನವೀನ್ ಮೃತದೇಹ ಸಿಕ್ಕಿದೆ, ಉಕ್ರೇನಿನ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ, ಅಲ್ಲಿ ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ, ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದರು.