ಬೆಂಗಳೂರು:ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಬೆಂಗಳೂರು ಟರ್ಫ್ ಕ್ಲಬ್ 25 ಲಕ್ಷ ರೂ. ಹಾಗೂ ಸಚಿವ ನಾರಾಯಣಗೌಡ ವೈಯಕ್ತಿಕವಾಗಿ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಸಿಎಂ ಪರಿಹಾರ ನಿಧಿಗೆ ಟರ್ಫ್ ಕ್ಲಬ್, ಸಚಿವ ನಾರಾಯಣಗೌಡರಿಂದ ದೇಣಿಗೆ - ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ
ಕೊರೊನಾ ವಿರುದ್ಧ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ಇದಕ್ಕಾಗಿ ಹಲವರು ದೇಣಿಗೆ ನೀಡುವ ಮೂಲಕ ಸರ್ಕಾರದ ಜೊತೆ ಕೈಜೋಡಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಟರ್ಫ್ ಕ್ಲಬ್ ಸಮಿತಿಯ ಶಿವಕುಮಾರ್ ಖೇಣಿ, ಹರಿಮೋಹನ್ ನಾಯ್ಡು, ಡಾ. ಸಿ.ಎ.ಪ್ರಶಾಂತ್ ಸಿಎಂಗೆ ದೇಣಿಗೆಯ ಚೆಕ್ ಹಾಸ್ತಾಂತರ ಮಾಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ಕೆ.ಸಿ.ನಾರಾಯಣಗೌಡ ವೈಯಕ್ತಿಕವಾಗಿ 5 ಲಕ್ಷ ರೂ. ನೀಡಿದ್ದಾರೆ. ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸಚಿವರು, ಚೆಕ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಇನ್ನು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಪುರುವಂಕರ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಆಶಿಶ್ ಪುರುವಂಕರ 500 ಕೋವಿಡ್ ಪರೀಕ್ಷಾ ಕಿಟ್ಗಳನ್ನು ಹಸ್ತಾಂತರಿಸಿದರು. ಒಂದು ಕಿಟ್ನಿಂದ ಹತ್ತು ಮಂದಿಯನ್ನು ಪರೀಕ್ಷಿಸಬಹುದಾಗಿದ್ದು, ಒಟ್ಟಾರೆಯಾಗಿ 5000 ಜನರನ್ನು ಪರೀಕ್ಷೆ ಮಾಡಬಹುದಾಗಿದೆ.