ಕರ್ನಾಟಕ

karnataka

ETV Bharat / city

ಪಕ್ಷಾಂತರ: ಬೆಂಬಲಿಗರ ಜೊತೆ 'ಕೈ' ಹಿಡಿದ ತುರುವೇಕೆರೆ ನಾರಾಯಣಗೌಡ - ಕಾಂಗ್ರೆಸ್ ನಾಯಕರ ಸಭೆ

ಅ.14 ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಿನೇಷನ್ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಕೈ ನಾಯಕರು ಸಭೆ ನಡೆಸಿದರು. ನಾಮಪತ್ರ ಸಲ್ಲಿಕೆ ಸಿದ್ಧತೆ ಕುರಿತಂತೆ ಮಾತುಕತೆ ನಡೆಸುತ್ತಿರುವ ನಾಯಕರು ಮುಂಜಾಗ್ರತಾ ಕ್ರಮಗಳ ಕುರಿತು ಇದೇ ವೇಳೆ ಚರ್ಚೆ ನಡೆಸಿದರು.

turuvekere-narayana-gowda-joining-congress-party
ಬೆಂಬಲಿಗರ ಜೊತೆ 'ಕೈ' ಹಿಡಿದ ತುರುವೇಕೆರೆ ನಾರಾಯಣಗೌಡ

By

Published : Oct 8, 2020, 3:52 PM IST

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ತುರುವೇಕೆರೆಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣಗೌಡ, ಇಂದು ತಮ್ಮ ಅನೇಕ ಬೆಂಬಲಿಗರ ಜತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಬಲಿಗರ ಜೊತೆ 'ಕೈ' ಹಿಡಿದ ತುರುವೇಕೆರೆ ನಾರಾಯಣಗೌಡ

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.

ಡಿಕೆಶಿ ನೇತೃತ್ವದಲ್ಲಿ ಸಭೆ:

ಅ.14 ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಿನೇಷನ್ ಹಿನ್ನೆಲೆ ಕೆಪಿಸಿಸಿ ಕಚೇರಿಯಲ್ಲಿ ಕೈ ನಾಯಕರು ಸಭೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವರಾದ ಯು.ಟಿ.ಖಾದರ್, ರಾಮಲಿಂಗಾರೆಡ್ಡಿ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಬಿ.ಎಲ್.ಶಂಕರ್, ಅಭ್ಯರ್ಥಿ ಕುಸುಮಾ, ತಂದೆ ಹನುಮಂತರಾಯಪ್ಪ ಭಾಗಿಯಾಗಿದ್ದಾರೆ.

ನಾಮಪತ್ರ ಸಲ್ಲಿಕೆ ಸಿದ್ಧತೆ ಕುರಿತಂತೆ ಮಾತುಕತೆ ನಡೆಸುತ್ತಿರುವ ನಾಯಕರು, ಯಾವ ರೀತಿ ಮುಂಜಾಗ್ರತಾ ಕ್ರಮವಹಿಸಿ ನಾಮಪತ್ರ ಸಲ್ಲಿಕೆ ಮಾಡಬೇಕು. ಎಷ್ಟು ಜನ ತೆರಳಬೇಕು ಹಾಗೂ ತೆರಳುವ ಮುನ್ನ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು.

ABOUT THE AUTHOR

...view details