ಬೆಂಗಳೂರು :ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನ 23 ಹೊಸ ಸೋಂಕಿತ ಪ್ರಕರಣ ದಾಖಲಾಗಿವೆ. ಇದರಲ್ಲಿ 19 ಜನರು ವಿದೇಶ ಪ್ರಯಾಣದ ಹಿಸ್ಟರಿ ಹೊಂದಿದ್ದು, ಉಳಿದಂತೆ ನಾಲ್ವರು ಸ್ಥಳೀಯರು ಎಂದು ತಿಳಿದು ಬಂದಿದೆ.
ಒಮಿಕ್ರಾನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಮುಖವಾಗಿ ಯುಎಸ್ಎ, ಯುರೋಪ್, ಆಫ್ರಿಕಾ ಸೇರಿದಂತೆ ಅನೇಕ ದೇಶಗಳಿಂದ ಬಂದಿರುವ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿದೆ ಎಂದು ತಿಳಿಸಿದ್ದಾರೆ. ಎಲ್ಲರಿಗೂ ಐಸೋಲೇಷನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಲ್ಲಿ ಒಮಿಕ್ರಾನ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಇಷ್ಟೊಂದು ಸೋಂಕಿತ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಸದ್ಯ 63 ಒಮಿಕ್ರಾನ್ ಸೋಂಕಿತರಿದ್ದಾರೆ.