ಬೆಂಗಳೂರು: ಬಿಜೆಪಿ ಕಾಂಗ್ರೆಸ್ ನಡುವೆ ಇದೀಗ ಪರ್ಸೆಂಟೇಜ್ ವಾರ್ ಶುರುವಾಗಿದೆ. ಟ್ವೀಟ್ ಮೂಲಕ ಆರೋಪ-ಪ್ರತ್ಯಾರೋಪ ಮಾಡುತ್ತಿವೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜಭವನದ ಕದ ತಟ್ಟಿದರೆ ಪರ್ಸಂಟೇಜ್ ರಾಜಕಾರಣದ ಪಿತಾಮಹ ಯಾರು ಎಂದು ಪ್ರಶ್ನಿಸಿ ಕಾಂಗ್ರೆಸ್ಗೆ ಬಿಜೆಪಿ ತಿರುಗೇಟು ನೀಡಿದೆ.
ಪರ್ಸಂಟೇಜ್ ಸೀದಾರೂಪಯ್ಯ ಹ್ಯಾಷ್ ಟ್ಯಾಗ್‌ನೊಂದಿಗೆ ಸರಣಿ ಟೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿದೆ. ಪರ್ಸೆಂಟ್ ರಾಜಕಾರಣದ ಪಿತಾಮಹರು ಯಾರು? 12% ಡಿಕೆಶಿ, 10% ಸೀದಾರೂಪಯ್ಯ ಮಂದ ಇಲಾಖೆಗಳು ಲೋಕೋಪಯೋಗಿ, ಇಂಧನ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಹಾಗಾದರೆ ಈ ಇಲಾಖೆಗಳನ್ನು ನಿಭಾಯಿಸಿದ್ದ ಡಾ.ಹೆಚ್.ಸಿ. ಮಹಾದೇವಪ್ಪ, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲರ ಪರ್ಸೆಂಟೇಜ್ ಎಷ್ಟು? ಎಲ್ಲ ಸೇರಿ 40% ಎಂದು ಬಿಜೆಪಿ ಟ್ವಿಟ್ ಮೂಲಕ ಕಾಂಗ್ರೆಸ್ಗೆ ಟಾಂಗ್ ನೀಡಿದೆ.
ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಸಿದ್ದರಾಮಯ್ಯನವರು ಹೇಳುತ್ತಿರುವುದು ಇವರಿಗೆ ಇರಬೇಕಲ್ಲವೇ?. 6 ರಿಂದ 8 % ಇದ್ದ ಲಂಚವನ್ನು 12% ಗೆ ಏರಿಸಿದ್ದೇ ಡಿಕೆಶಿ ಎಂದು ಸಲೀಂ ಬಹಿರಂಗವಾಗಿ ಹೇಳಿದ್ದರ ಬಗ್ಗೆ ಮೊದಲು ಮಾತನಾಡಿ, ಹಾಗಾದರೆ ಭ್ರಷ್ಟಾಚಾರವನ್ನು ಸಾಂಘೀಕರಿಸಿದ್ದೇ ನೀವು ಎಂದಾಯ್ತಲ್ಲವೇ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.