ಬೆಂಗಳೂರು :ಸುದೀರ್ಘ ರಾಜಕೀಯ ಜೀವನದಲ್ಲಿ ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದವರು. ಆದರೆ, ಈಗ ಮಾತ್ರ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ.