ಬೆಂಗಳೂರು :ಹೆಣ್ಣೂರು ಪೊಲೀಸರು ಕಾರ್ಯಾಚರಣೆ ನಡೆಸಿ ದುಬಾರಿ ಬೆಲೆಗೆ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಣ್ಣೂರು ಪೊಲೀಸರ ಹಠಾತ್ ದಾಳಿ : ಅಕ್ರಮ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದವರ ಬಂಧನ - ಹೆಣ್ಣೂರು ಪೊಲೀಸರ ಹಠಾತ್ ದಾಳಿ
ಎಸಿಪಿ ಸಕ್ರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Hennuru police
ಶಣ್ಮುಕಯ್ಯ ಎನ್ನುವವರಿಂದ 17 ರೆಮ್ಡಿಸಿವಿರ್ ಔಷಧ ಬಾಟಲ್ಗಳನ್ನು ಪತ್ತೆಹಚ್ಚಲಾಗಿದೆ. ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ದಾಳಿ ನಡೆಸಿದ ಹೆಣ್ಣೂರು ಪೊಲೀಸರು, ಸುಮಾರು ₹57 ಸಾವಿರ ಮೌಲ್ಯದ ರೆಮ್ಡಿಸಿವಿರ್ ವಶಕ್ಕೆ ಪಡೆದಿದ್ದಾರೆ.
ಎಸಿಪಿ ಸಕ್ರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.