ಬೆಂಗಳೂರು: ನಿರ್ಮಾಪಕ ಉಮಾಪತಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ 16 ಹಾಗೂ 17ನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ದರ್ಶನ್ ಹಾಗೂ ಸಂಜು ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಜಯನಗರ ಪೊಲೀಸರಿಗೆ ಒಪ್ಪಿಸಲಾಗಿದೆ.
2020ರ ಡಿಸೆಂಬರ್ನಲ್ಲಿ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಪಕ ಉಮಾಪತಿ, ಸಹೋದರ ದೀಪಕ್, ರೌಡಿಶೀಟರ್ ಸೈಕಲ್ ರವಿ ಹತ್ಯೆಗೆ ಸಂಚು ರೂಪಿಸಿ ಮಾರಕಾಸ್ತ್ರ ಹಿಡಿದು 15ಕ್ಕಿಂತ ಹೆಚ್ಚು ಮಂದಿ ಪ್ಲ್ಯಾನ್ ಮಾಡಿಕೊಂಡಿದ್ದರು.