ಬೆಂಗಳೂರು:ಸಿಲಿಕಾನ್ ಸಿಟಿಯ ದಕ್ಷಿಣಾ ವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳಿಬ್ಬರ ಹೆಡೆಮುರಿ ಕಟ್ಟುವಲ್ಲಿ ಬಸವನಗುಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವಕುಮಾರ್ ಹಾಗೂ ಅಪ್ಪಯ್ಯ ಬಂಧಿತರು. ಬಂಧಿತರಿಂದ ₹ 21 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ವಿಚಾರಣೆ ವೇಳೆ ಆರೋಪಿಗಳ ವಿರುದ್ದ 11 ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ಈಚೆಗೆ ಈ ಇಬ್ಬರು ಆರೋಪಿಗಳ ವಿರುದ್ಧ ಸರಗಳ್ಳತನದ ಪ್ರಕರಣ ದಾಖಲಾಗಿತ್ತು. ಇವರು ಎಸಗುತ್ತಿದ್ದ ಕೃತ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಹಾಗಾಗಿ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ಅವರು ತಂಡವೊಂದು ರಚಿಸಿದ್ದರು.
ದುಷ್ಕರ್ಮಿಗಳು ವಾಣಿಜ್ಯ ಪ್ರದೇಶಗಳಲ್ಲಿ, ಒಂಟಿ ಮಹಿಳೆಯರನ್ನು, ವಯಸಾದವರನ್ನೇ ಗುರಿಯಾಗಿಸಿಕೊಂಡು ವಿಳಾಸ ಕೇಳುವ ನೆಪದಲ್ಲಿ ಕತ್ತಿನಲ್ಲಿದ್ದ ಸರಗಳನ್ನು ಕ್ಷಣಾರ್ಧಾದಲ್ಲಿ ಎಗರಿಸಿ ಪರಾರಿಯಾಗುತ್ತಿದ್ದರು. ವಾಣಿಜ್ಯ ಪ್ರದೇಶಗಳಲ್ಲಿ, ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದರು.
ಬಸವನಗುಡಿ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಕದ್ದ ಸರಗಳನ್ನು ಅಟ್ಟಿಕಾ ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡುತ್ತಿರುವ ವಿಚಾರ ಕೂಡ ಬೆಳಕಿಗೆ ಬಂದಿದೆ. ಜಾಮೀನು ಕೊಡಿಸಲು ವಕೀಲರಿಗೆ ಫೀಸ್ ನೀಡುವುದಕ್ಕಾಗಿ ಕಳ್ಳತನ ಮಾಡತ್ತಿದ್ದೇವೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದಾರೆ.