ಬೆಂಗಳೂರು: ದರೋಡೆಗೆ ಸಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಮನೋಜ್ ಅಲಿಯಾಸ್ ಮನು ಮತ್ತು ಆತನ ಸಹಚರ ಶೇಖರ್ ಎಂಬುವರನ್ನು ಬಂಧಿಸಲಾಗಿದೆ.
ದರೋಡೆಗೆ ಸಂಚು: ರೌಡಿ ಶೀಟರ್ ಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು - two dacoits arrested in banglore
ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ. ಸಾರ್ವಜನಿಕರ ಬಳಿ ಚಿನ್ನಾಭರಣ ದೋಚಲು ಹೊಂಚು ಹಾಕಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ರೌಡಿ ಶೀಟರ್ ಮನು ವಿರುದ್ದ ಪೀಣ್ಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಕೊಲೆ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಓದಿ :ನಕ್ಸಲ್ ಸಾವಿತ್ರಿ ಶೃಂಗೇರಿ ಕೋರ್ಟ್ಗೆ ಹಾಜರು.. ಏ.8ರವರೆಗೆ ಪೊಲೀಸ್ ಕಸ್ಟಡಿಗೆ